ರಾಯಚೂರು: ಚಾಕ್ಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ. 4ನೇ ತರಗತಿ ವಿದ್ಯಾರ್ಥಿನಿಗೆ ಚಾಕ್ಲೇಟ್ ಕೊಡಿಸೋದಾಗಿ ಪುಸಲಾಯಿಸಿ ಸ್ಕೂಟರ್ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸಪನ್ ಮಂಡಲ್(52) ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಎಚ್ ಕ್ಯಾಂಪ್ ನಲ್ಲಿ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.