ಅಮೆರಿಕದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿದ್ದಾರೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ಮೋದಿ

ವಾಷಿಂಗ್ಟನ್: ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಿದ್ದಾರೆ ಎಂದು ಶ್ವೇತ ಭವನ ಹೇಳಿದ್ದು, ಇದು ದೊಡ್ಡ ಸಂಗತಿ ಎಂದಿದೆ. ಈ ಬಗ್ಗೆ ಮಾತನಾಡಿದ ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ, ಪ್ರಧಾನಿ ಮೋದಿ ಅವರು ಭೇಟಿಯ ಕೊನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಅದು ಮುಖ್ಯವಾಗಿದೆ ಎಂದು ನಾವು ಭಾವಿಸುತ್ತೇವೆ. ಇದು ಮುಖ್ಯವೆಂದು ಅವರೂ ಭಾವಿಸಿದ್ದು ನಮಗೆ ಸಂತೋಷವಾಗಿದೆ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಾಯಕರಿಬ್ಬರು ಅಮೆರಿಕದ ಮಾಧ್ಯಮದಿಂದ ಒಂದು ಪ್ರಶ್ನೆ ಮತ್ತು ಭಾರತೀಯ ಪತ್ರಕರ್ತರಿಂದ ಒಂದು ಪ್ರಶ್ನೆಗೆ ಉತ್ತರಿಸಲಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿಲ್ಲ. ಅವರು ಹೆಚ್ಚಾಗಿ ಮಾಧ್ಯಮದವರಿಗೆ ನೇರಾ ನೇರಾ ಸಂದರ್ಶನಗಳನ್ನಷ್ಟೇ ಕೊಟ್ಟಿರುವುದು,

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಇತರ ವಿಶ್ವ ನಾಯಕರೊಂದಿಗೆ ಶ್ವೇತಭವನದ ಪತ್ರಿಕಾಗೋಷ್ಠಿಗಳನ್ನು ನಿಯಂತ್ರಿಸಲಾಗಿದೆ. ಯುಎಸ್ ಅಧಿಕಾರಿಗಳು ಬೈಡನ್ ಮತ್ತು ಅವರ ಅತಿಥಿಗಳಲ್ಲಿ ಪ್ರಶ್ನೆಗಳನ್ನು ಕೇಳಲು ಅಮೆರಿಕನ್ ಮತ್ತು ವಿದೇಶಿ ಮಾಧ್ಯಮಗಳಿಂದ ವರದಿಗಾರರನ್ನು ಮೊದಲೇ ಗೊತ್ತುಪಡಿಸುತ್ತಾರೆ. ಇಲ್ಲಿ ಬಹಳ ಸೀಮಿತ ಸಂಖ್ಯೆಯ ಪ್ರಶ್ನೆಗಳನ್ನು ಅನುಮತಿಸಲಾಗಿದೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ.

ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ರಾಜ್ಯ ಪ್ರವಾಸದಲ್ಲಿದ್ದಾರೆ. ಪ್ರಧಾನಮಂತ್ರಿಯವರು ನಿನ್ನೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ನಂತರ ವಾಷಿಂಗ್ಟನ್ ಡಿಸಿಗೆ ತೆರಳಿದರು. ಅಲ್ಲಿ ಅವರು ಯುಎಸ್ ಅಧ್ಯಕ್ಷ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿದರು.

ಇಂದು ಸಂಜೆ ಅವರು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರ ಎರಡನೇ ಭಾಷಣವಾಗಿದೆ. ಹೀಗೆ ಎರಡು ಬಾರಿ ಮಾತನಾಡುತ್ತಿರುವ ಮೊದಲನೇ ಭಾರತೀಯ ಪಿಎಂ ಮೋದಿ ಆಗಿದ್ದಾರೆ.