ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸಿದ್ದಾಪುರ ತಾಲೂಕು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಲ್ ಸಿರ್ಸಿ ಸಹಭಾಗಿತ್ವದಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಉಪನ್ಯಾಸಕ ಮಂಜಪ್ಪ ಎಂ . ಆರ್ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ತಂಬಾಕು ಸೇವನೆಯಿಂದ ಆಗುವ ಅನಾಹುತ ಮತ್ತು ಕ್ಯಾನ್ಸರ್ ಕಾಯಿಲೆಯ ಗುಣಲಕ್ಷಣಗಳು ಹಾಗೂ ಮುಂಜಾಗ್ರತೆ ಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ಕ್ಷಯರೋಗದ ಮೇಲ್ವಿಚಾರಕ ಮಲ್ಲನಗೌಡರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕ್ಷಯ ರೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಪ್ರಭಾವತಿ ರವರು ಮತ್ತು ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಮತ್ತು ವಿಭಾಗದ ಸೇವಾ ಪ್ರತಿನಿಧಿ ಅವರು ಉಪಸ್ಥಿತರಿದ್ದರು.