ಶಾಲಾ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿರುವ ವೇಳೆ ಪ್ರಾಂಶುಪಾಲರ ಸಾಕು ನಾಯಿ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಾಯವಾಗಿದೆ. ಹೈದರಾಬಾದ್ನ ಸನತ್ ನಗರದಲ್ಲಿರುವ ಸೇಂಟ್ ಥೆರೆಸಾ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿರುವಾಗ ಘಟನೆ ಸಂಭವಿಸಿದೆ.
ಗಾಯಗೊಂಡು ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಂಶುಪಾಲರು ನಾಯಿಯನ್ನು ಶಾಲೆಗೆ ಕರೆತಂದಿರುವುದಕ್ಕೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಪ್ರಾಂಶುಪಾಲರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರೆಸಿದ್ದಾರೆ. ಇದೇ ಫೆಬ್ರವರಿಯಲ್ಲಿ ಅಂಬರ್ ಪೇಟೆಯಲ್ಲಿ ನಾಯಿಗಳು 5 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ್ದವು, ಈಗಲೂ ನಾಯಿಗಳ ದಾಳಿ ಮುಂದುವರೆದಿದೆ.