ನವದೆಹಲಿ/ಜ್ಯೂರಿಚ್: ಸ್ವಿಜರ್ಲೆಂಡ್‌ನಲ್ಲಿರುವ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ.
2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್ (ಅಂದಾಜು 30 ಸಾವಿರ ಕೋಟಿ ರೂ.) ಇಳಿಕೆಯಾಗಿದೆ ಎಂದು ಸ್ವಿಸ್ ಕೇಂದ್ರೀಯ ಬ್ಯಾಂಕ್‌ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.
2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.
006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು.
ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.