ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಸಹಾಯಯ ಭದ್ರತಾ ಅಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಆರ್.ಕೆ.ಸಿಂಗ್ ಅವರು ವಿಧಿವಶರಾಗಿದ್ದಾರೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು.
ಸರಳ, ಸ್ನೇಹ ಪರ ವ್ಯಕ್ತಿತ್ವದ ಶಿಸ್ತಿನ ಸಿಪಾಯಿ ಆರ್.ಕೆ.ಸಿಂಗ್ ಅವರು ಕಾಗದ ಕಾರ್ಖಾನೆಯಲ್ಲಿ ಸಹಾಯಕ ಭದ್ರತಾ ಅಧಿಕಾರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು. ಉತ್ತರ ಪ್ರದೇಶದಲ್ಲಿರುವ ತನ್ನ ಸ್ವಗೃಹದಲ್ಲಿ ವಿಧಿವಶರಾದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧುಬಳಗವನ್ನು ಅಗಲಿದ್ದಾರೆ. ಆರ್.ಕೆ.ಸಿಂಗ್ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಭದ್ರತಾ ಅಧಿಕಾರಿ ಕುಶಾಲಪ್ಪ.ಎಸ್ ಸೇರಿದಂತೆ ಕಾರ್ಖಾನೆಯ ಭದ್ರತಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.