ಹಳಿಯಾಳ ಪಟ್ಟಣದ ವಾರ್ಡ್ ನಂ:10 ಮತ್ತು 11 ರಲ್ಲಿ ನೂತನ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಹಳಿಯಾಳ : ಪಟ್ಟಣದ ಕಸಬಗಲ್ಲಿ ಮತ್ತು ಜಂಬಾಳಗಲ್ಲಿಯಲ್ಲಿ ಬರುವ ವಾರ್ಡ್ ನಂ:10 ಮತ್ತು 11 ರಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಯ್ತು.

ಹಳಿಯಾಳ ಪುರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಅಜರ್ ಬಸರಿಕಟ್ಟಿಯವರು ಗುದ್ದಲಿ ಪೂಜೆಯನ್ನು ನೆರವೇರಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಿ ಗುಣಮಟ್ಟದಿಂದ ಕಾಮಗಾರಿ ನಡೆಸಿ ಯೋಗ್ಯ ರಸ್ತೆ ನಿರ್ಮಿಸಿಕೊಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.