ತಾಟಗೇರಾದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾಂಡೇಲಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆಶ್ರಯದಡಿ ದಾಂಡೇಲಿ ತಾಲ್ಲೂಕಿನ ತಾಟಗೇರಾದಲ್ಲಿ ಸ್ಥಳೀಯ ಮಹಿಳೆಯರಿಗಾಗಿ ಆಯೋಜಿಸಲಾದ ಒಂದು ತಿಂಗಳ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಇಂದು ಚಾಲನೆಯನ್ನು ನೀಡಲಾಯ್ತು.

ಕಾರ್ಯಕ್ರಮವನ್ನು ಸ್ಥಳೀಯ ಶಾಲಾ ಮುಖ್ಯೋಪಾಧ್ಯಯರಾದ ನಾಗರಾಜ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಮಹಿಳೆಯರಿಗೆ ತಮ್ಮ ಮನೆ ಕೆಲಸದ ನಂತರ ಬಿಡುವಿನ ವೇಳೆಯಲ್ಲಿ ಆರ್ಥಿಕ ಸ್ವಾವಲಂಬನಾ ಚಟುವಟಿಕೆಯನ್ನು ನಡೆಸಲು ಹೊಲಿಗೆ ತರಬೇತಿ ಅತೀ ಉಪಯುಕ್ತವಾಗಿದೆ. ಈ ತರಬೇತಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ನಿಟ್ಟಿನಲ್ಲಿ ಸ್ಪೂರ್ತಿಯಾಗಲೆಂದರು.

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಯೋಜನಾ ಸಂಯೋಜಕರಾದ ವಿನಾಯಕ್ ಚೌವ್ಹಾಣ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯ ಗಣ್ಯರಾದ ರಮೇಶ್ ವಾಟ್ಲೇಕರ್ ಮತ್ತು ಮಹಾದೇವ ವಾಟ್ಲೇಕರ್ ಅವರು ಭಾಗವಹಿಸಿದ್ದರು.

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ದಾಂಡೇಲಿ ವಿಸ್ತರಣಾ ಕೇಂದ್ರದ ಯೋಜನಾಧಿಕಾರಿ ನಟರಾಜ್ ಅಂಗಡಿಯವರು ಸ್ವಾಗತಿಸಿದರು. ಸಂಸ್ಥೆಯ ಮೇಲ್ವಿಚಾರಕ ಅಂದಾನಪ್ಪ ಅಂಗಡಿ ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.