ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಅಂತ್ಯ; 2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದ ನಾಯಕರು

ಎಲ್ಲಾ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲು ಒಪ್ಪಿಕೊಂಡಿವೆ, ಆದರೆ ವಿವರಗಳನ್ನು ಅಂತಿಮಗೊಳಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಮತ್ತೊಂದು ಸಭೆ ನಡೆಯಲಿದೆ ಎಂದು ಬಿಹಾರದ ಮುಖ್ಯಮಂತ್ರಿ   ಹೇಳಿದ್ದಾರೆ. ಪಾಟ್ನಾದಲ್ಲಿ ಶುಕ್ರವಾರ ನಡೆದ ವಿರೋಧ ಪಕ್ಷದ ಸಭೆ ನಂತರ ಮಾತನಾಡುತ್ತಿದ್ದರವರು. ಸೀಟು ಹಂಚಿಕೆ ಮತ್ತು ಪಕ್ಷವಾರು ವಿಭಜನೆಯ ವಿವರಗಳು ಸೇರಿದಂತೆ ವಿವರಗಳನ್ನು ಶಿಮ್ಲಾ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ್ ಹೇಳಿದ್ದಾರೆ.

ಮುಂದಿನ ಸಭೆಯನ್ನು ಜುಲೈ 10 ಅಥವಾ 12 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಈ ಸಭೆಯಲ್ಲಿ  ಎಲ್ಲಾ ರಾಜ್ಯಗಳ ಕಾರ್ಯತಂತ್ರವನ್ನು ಚರ್ಚಿಸಲಾಗುವುದು.2024ರಲ್ಲಿ ನಾವು ಒಟ್ಟಾಗಿ ಚುನಾವಣೆ ಎದುರಿಸಬೇಕು. ಬಿಜೆಪಿಯನ್ನು ಕಿತ್ತೊಗೆಯಲು ನಾವು ನಿರ್ಧರಿಸಿದ್ದು, ಮುಂದಿನ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದಿದ್ದಾರೆ ಖರ್ಗೆ.

ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ, ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್​,  ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ಮೆಹಬೂಬಾ ಮುಫ್ತಿ, ಬಿಹಾರದ ಮಾಜಿ ಸಿಎಂ, ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಂ, ಜೆಎಂಎಂ ಮುಖ್ಯಸ್ಥ ಶಿಬು ಸೊರೇನ್​ ಭಾಗಿಯಾಗಿದ್ದಾರೆ.