ಯಲ್ಲಾಪುರ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿದರೆ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಪಟ್ಟಣ ಅರಣ್ಯ ಸಭಾಭವನದಲ್ಲಿ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾರಿಗೂ ಆರ್ಥಿಕ ಮುಗ್ಗಟ್ಟಿನಿಂದ ವಿದ್ಯೆ ಪಡೆಯಲು ಸಾಧ್ಯವಾಗದ ಸ್ಥಿತಿ ಬರಬಾರದು. ವಿದ್ಯೆಗೆ ಪ್ರೋತ್ಸಾಹಿಸುವವರ ಸಂಖ್ಯೆ ಅಪಾರ ಪ್ರಮಾಣದಲ್ಲಿದೆ. ಅಂಥವರ ನೆರವಿನೊಂದಿಗೆ ವಿದ್ಯಾವಂತರಾಗಿ, ಸಾಧನೆ ಮಾಡಬೇಕೆಂದರು.
ಸತತ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದು ಸಾಧನೆ ಮಾಡಿದ ಸರ್ಕಾರಿ ನೌಕರರ ಮಕ್ಕಳನ್ನು ಪುರಸ್ಕರಿಸಲಾಯಿತು.
ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಬಿಇಒ ಎನ್.ಆರ್.ಹೆಗಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ತಾಲೂಕಾಧ್ಯಕ್ಷ ಆರ್.ಆರ್.ಭಟ್ಟ, ತಾ.ಪಂ ಇಒ ಜಗದೀಶ ಕಮ್ಮಾರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ಗೌರವಾಧ್ಯಕ್ಷ ಜಿ.ಎಂ.ಭಟ್ಟ, ಆರ್.ಎಫ್.ಒ ಎಲ್.ಎ.ಮಠ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ.ಆರ್.ನಾಯಕ, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ ಇತರರಿದ್ದರು. ಪ್ರಜ್ವಲ್ ತಳೆಕರ್ ಪ್ರಾರ್ಥಿಸಿದರು. ರಾಜ್ಯ ಪರಿಷತ್ ಸದಸ್ಯ ಸಂಜೀವಕುಮಾರ ಹೊಸ್ಕೇರಿ, ತಾಲೂಕು ಸರ್ಕಾರಿ ನೌಕರರ ಸಂಘದ ಖಜಾಂಜಿ ಸುಭಾಸ ನಾಯಕ ನಿರ್ವಹಿಸಿದರು.