ಹಳಿಯಾಳ : ಯಾವುದೇ ಪರವಾನಿಗೆಯಿಲ್ಲದೆ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡ ಘಟನೆ ಹಳಿಯಾಳ ತಾಲ್ಲೂಕಿನ ಬೆಳವಟಗಿ ಗ್ರಾಮದಲ್ಲಿ ನಡೆದಿದೆ.
ಬೆಳವಟಗಿ ಗ್ರಾಮದ ನಿವಾಸಿ ಪರಶುರಾಮ ತಿಪ್ಪಣ್ಣಾ ಮಾಳವಿ ಎಂಬಾತನೆ ಯಾವುದೇ ಪರವಾನಿಗೆಯನ್ನು ಪಡೆಯದೆ ಮಧ್ಯ ಮಾರಾಟ ಮಾಡುತ್ತಿರುವ ಸಂದರ್ಭದಲ್ಲಿ ಪಿಎಸೈ ವಿನೋದ್.ಎಸ್.ಕೆ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಪರಶುರಾಮ ತಿಪ್ಪಣ್ಣಾ ಮಾಳವಿ ಎಂಬಾತನ ಮೇಲೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.