ಶಿಲ್ಲಾಂಗ್: 16 ವರ್ಷ ವಯಸ್ಸಿನವರು ಲೈಂಗಿಕ ವಿಚಾರದ ಬಗ್ಗೆ ತಮ್ಮದೇ ಆದ ಪ್ರಜ್ಞಾಪೂರ್ವಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ
ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (POCSO) ಅಡಿಯಲ್ಲಿ ದಾಖಲಾಗಿದ್ದ ಎಫ್‍ಐಆರ್ (FIR) ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿಯೆಂಗ್ಡೋ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅರ್ಜಿದಾರರು ಮತ್ತು ಆಪಾದಿತ ಸಂತ್ರಸ್ತೆ ಪ್ರೀತಿಸುತ್ತಿದ್ದರಿಂದ ಇದು ಲೈಂಗಿಕ ದೌರ್ಜನ್ಯದ ಕೃತ್ಯವಲ್ಲ. ಸಂಪೂರ್ಣವಾಗಿ ಸಮ್ಮತಿಯಿಂದ ನಡೆದ ಕ್ರಿಯೆ ಎಂದು ಮನವಿಯಲ್ಲಿ ಹೇಳಲಾಗಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.
ನ್ಯಾಯಾಲಯವು ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಪರಿಶೀಲಿಸುತ್ತದೆ. ಅಂತಹ ವ್ಯಕ್ತಿಯು ತನ್ನ ಬಗ್ಗೆ ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥನಾಗಿದ್ದಾರೆಯೇ ಎಂಬುದನ್ನು ಪರಿಗಣಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ನ್ಯಾಯಾಲಯದಲ್ಲಿ ಅಪ್ರಾಪ್ತ ಬಾಲಕಿಯು ತನ್ನ ಹೇಳಿಕೆ ಮತ್ತು ಸಾಕ್ಷ್ಯದಲ್ಲಿ ತಾನು ಅರ್ಜಿದಾರರ ಗೆಳತಿ ಎಂದು ಬಹಿರಂಗಪಡಿಸಿದ್ದಾಳೆ. ಅಲ್ಲದೇ ಯಾವುದೇ ಬಲವಂತವಿಲ್ಲದೆ ಇಬ್ಬರ ಒಪ್ಪಿಗೆಯಿಂದಲೇ ಲೈಂಗಿಕ ಕ್ರಿಯೆ ನಡೆದಿದೆ ಎಂದು ದೃಢಪಡಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಯಿತು. ಬಳಿಕ ಪೋಕ್ಸೋ ಸಂಬಂಧಿಸಿದ ಎಫ್‍ಐಆರ್‌ನ್ನು ಕೋರ್ಟ್ ರದ್ದುಗೊಳಿಸಿದೆ.