ದ್ರೌಪದಿ ಮುರ್ಮು ಪದಗ್ರಹಣ: ಯಲ್ಲಾಪುರದಲ್ಲಿ ಸಂಭ್ರಮಾಚರಣೆ

ಯಲ್ಲಾಪುರ: ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ದೇಶದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಮೂಲಕ ದೇಶದ ಸಾಮಾನ್ಯ ಪ್ರಜೆಯೂ ಅತ್ಯುನ್ನತ ಸ್ಥಾನಕ್ಕೆ ಏರಬಹುದು ಎಂಬುದು ಸಾಬೀತಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಬಿಜೆಪಿ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ, ಪ್ರಮುಖರಾದ ವಿಜಯ ಮಿರಾಶಿ, ಶಿರೀಷ ಪ್ರಭು ಇತರರಿದ್ದರು.