ಕೇಂದ್ರ ಸಚಿವ Dharmendra Pradhan ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಿ.ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದಾಗ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುವ ಪಾಪವನ್ನು ಮಾಡಿದ್ದರು ಎಂದು ಹೇಳಿದ್ದಾರೆ. ಹೀಗಾಗಿ ಆ ದಿನವನ್ನು ಕರಾಳ ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ದೇಶದಲ್ಲಿ ಸಂವಿಧಾನವನ್ನು ಬುಡಮೇಲು ಮಾಡುವ ಪಾಪವನ್ನು ಕಾಂಗ್ರೆಸ್ ಮಾಡಿದೆ ಮತ್ತು ಅದೇ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತೇವೆ ಎಂದಿದ್ದಾರೆ. 1975ರ ಜೂನ್ 25ರಂದು ಕಾಂಗ್ರೆಸ್ ಪಕ್ಷವು ಜನರಿಗೆ ಎಷ್ಟು ಅಪಾಯಕಾರಿ ಎಂಬುದನ್ನು ತಿಳಿಸಿಕೊಟ್ಟಿತ್ತು. ತುರ್ತು ಪರಿಸ್ಥಿತಿಯು ಜೂನ್ 25 1075 ರಿಂದ ಮಾರ್ಚ್ 21 1977ರವರೆಗೆ ಜಾರಿಯಲ್ಲಿತ್ತು. ಆ ದಿನದಂದು ಮಹಾ ಜನ ಸಂಪರ್ಕ ಅಭಿಯಾನವನ್ನು ನಡೆಸಲು ಪಕ್ಷವು ನಿರ್ಧರಿಸಿದೆ.
ಅಭಿಯಾನದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೌತಮಬುದ್ಧ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ ಹಾಗೂ ಸಚಿವೆ ಮೀನಾಕ್ಷಿ ಲೇಖಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವದ ಮನೋಭಾವವನ್ನು ಬಲಪಡಿಸಲು ಶ್ರಮಿಸಿದ ಎಲ್ಲ ಧೈರ್ಯಶಾಲಿಗಳಿಗೆ ನಾನು ಗೌರವ ಸಲ್ಲಿಸುತ್ತೇನೆ. ತುರ್ತು ಪರಿಸ್ಥಿತಿಯ ಕರಾಳ ದಿನಗಳು ನಮ್ಮ ಇತಿಹಾಸದ ಆ ಅವಧಿಯಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ. ಇದು ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಸಂಪೂರ್ಣ ವಿರುದ್ಧವಾಗಿತ್ತು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.