ಟಿ.ನರಸೀಪುರದಲ್ಲಿ ಆಟೋ ಪಲ್ಟಿ, 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಮೈಸೂರು: ಆಟೋ ಪಲ್ಟಿಯಾಗಿ10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯು ಟಿ.ನರಸೀಪುರತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ. ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್​​ಎಲ್​ಸಿ ವಿದ್ಯಾರ್ಥಿಗಳು ಆಪೇ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.