ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕು ಘಟಕ ಉದ್ಘಾಟಿಸಿದ ಡಾ. ಕರುಣಾಕರ ನಾಯ್ಕ


ಅಂಕೋಲಾ : ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳು ಇಡೀ ಮನುಕುಲಕ್ಕೂ ಅನ್ವಯವಾಗುವಂತದ್ದು. ಒಂದೇ ಮತ, ಒಂದೇ ಧರ್ಮ, ಒಂದೇ ದೇವರು ಎಂಬ ತತ್ವದಡಿಯಲ್ಲಿ ತಮ್ಮ ಇಡೀ ಜೀವನವನ್ನು ಅಸ್ಪ್ರಶ್ಯರ ಪರವಾಗಿ ಮೀಸಲಿಟ್ಟು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಇಂತವರ ಆದರ್ಶಗಳು ಇಂದಿನ ಯುವಜನಾಂಗದವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವೈದ್ಯ ಡಾ. ಕರುಣಾಕರ ಎಂ. ನಾಯ್ಕ ಹೇಳಿದರು.
ಪಟ್ಟಣದ ಪಿ.ಎಂ. ಪ್ರೌಢಶಾಲೆಯ ರೈತ ಭವನದ ಶ್ರೀ ನಾರಾಯಣಗುರು ವೇದಿಕೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಂತಾಗಲಿ ಎಂದರು.
ಮೀನುಗಾರಿಕೆ ನಿಗಮದ ಮಾಜಿ ಅಧ್ಯಕ್ಷ, ನಾಮಧಾರಿ ಮುಖಂಡ ರಾಜೇಂದ್ರ ವಿ. ನಾಯ್ಕ ಮಾತನಾಡಿ, ನಾಮಧಾರಿ ಸಮಾಜದವರು ಇತರೆ ಎಲ್ಲ ಸಮಾಜದೊಂದಿಗೆ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಾರೆ. ನಮ್ಮ ಸಮಾಜದಲ್ಲಿಯೂ ಸಾಕಷ್ಟು ಜನ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಾಧನೆಗಳನ್ನು ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದರು.
ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಡಿ.ಜಿ. ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಘವು ನೂತನವಾಗಿ ರಚನೆಗೊಂಡಿದ್ದು, ಮುಂದಿನ ದಿನಗಳಲ್ಲಿ ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದರು.
ಇಂಜಿನಿಯರ್ ರಮಾನಂದ ನಾಯಕ ಕೊಂಡಳ್ಳಿ, ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಗೌರವಾಧ್ಯಕ್ಷ ಮಾದೇವ ಎಂ. ನಾಯ್ಕ, ಮಹಿಳಾ ಜಿಲ್ಲಾಧ್ಯಕ್ಷೆ ಮಂಜುಳಾ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ ಮಾತನಾಡಿದರು.
ಸಂಘದ ಪದಾಧಿಕಾರಿಗಳಾದ ಉಮೇಶ ಎನ್. ನಾಯ್ಕ, ಶ್ರೀಪಾದ ಟಿ. ನಾಯ್ಕ, ಸಂಜಯ ಆರ್. ನಾಯ್ಕ, ರಮೇಶ ಎಸ್. ನಾಯ್ಕ, ವಸಂತ ನಾಯ್ಕ, ಮಂಜುನಾಥ ಕೆ. ನಾಯ್ಕ, ನಾಗರಾಜ ಮಂಜಗುಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.