Jammu And Kashmir ದ ಕುಲ್ಗಾವ್ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ನನ್ನು ಹತ್ಯೆ ಮಾಡಲಾಗಿದೆ. ಕುಲ್ಗಾಮ್, ಬಂಡಿಪೋರಾ, ಶೋಪಿಯಾನ್ ಮತ್ತು ಪುಲ್ವಾಮಾದ ನಾಲ್ಕು ಜಿಲ್ಲೆಗಳ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಈ ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕ ಗಡಿಯಾಚೆಯಿಂದ ಬಂದವನಲ್ಲ, ಸ್ಥಳೀಯನಾಗಿದ್ದನು ಎನ್ನುವ ಮಾಹಿತಿ ಲಭ್ಯವಾಗಿದೆ
ಇವರನ್ನು ಆದಿಲ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ. ಬಹಿರಂಗವಾದ ಮಾಹಿತಿಯ ಪ್ರಕಾರ, ಹತ್ಯೆಗೀಡಾದ ಭಯೋತ್ಪಾದಕ ಆದಿಲ್ ಇತ್ತೀಚೆಗೆ ಅಲ್ ಬದ್ರ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಹೌರಾ ಗ್ರಾಮದ ಮನೆಯೊಂದರಲ್ಲಿ ಭಯೋತ್ಪಾದಕ ಅಡಗಿಕೊಂಡಿದ್ದ. ಈ ಬಗ್ಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಮಾಹಿತಿ ಪಡೆದಿದ್ದರು. ನಂತರ ತಕ್ಷಣವೇ ಉಗ್ರರನ್ನು ಸುತ್ತುವರಿಯಲು ಕಾರ್ಯಾಚರಣೆ ನಡೆಸಲಾಯಿತು. ಪ್ರಸ್ತುತ, ಪೊಲೀಸರು ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ತನಿಖೆ ನಡೆಸಲಾಗುತ್ತಿದೆ. ಭಯೋತ್ಪಾದಕ ಅಡಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಜಂಟಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.