ಹಾಸನದಲ್ಲಿ ಭೂಮಿ ಕಂಪಿಸಿದ ಅನುಭವ – ಮನೆ ಸೇರಲು ಹೆದರುತ್ತಿರುವ ಜನ

ಹಾಸನ: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.