ಸಿಇಟಿ ಫಲಿತಾಂಶ ಜುಲೈ 30 ರಂದು ಪ್ರಕಟ

ಬೆಂಗಳೂರು: ಜೂನ್‌ನಲ್ಲಿ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 30 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್‌ಸಿ ಮತ್ತು ಐಸಿಎಸ್‌ಇ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು. ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಮ್ಮ ಅಂಕಗಳನ್ನು ಜು.26 ರ ಸಂಜೆಯೊಳಗೆ ಅಪ್ಲೋಡ್ ಮಾಡಬೇಕೆಂದು ತಿಳಿಸಿದ್ದಾರೆ.