ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

Manipur ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಮಣಿಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್​ನ ಕೊಹಿಮಾ ಬಳಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಎರಡು ಪಿಸ್ತೂಲು, ನಾಲ್ಕು ಮ್ಯಾಗಜಿನ್​ಗಳು, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಸ್ಸಾಂ ರೈಫಲ್ಸ್​ ಹಾಗೂ ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಜೂನ್ 26ರಂದು ಬೆಳಗಿನ ಜಾವ 2 ಗಮಟೆ ವೇಳೆಗೆ ಅಸ್ಸಾಂ ರೈಫಲ್ಸ್ ಮತ್ತು ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಕಾರ್ಯಾಚರಣೆಯಲ್ಲಿ ವಾಹನವನ್ನು ಮೊದಲು ಪತ್ತೆ ಹಚ್ಚಿದರು ಬಳಿಕ ಸತತ 4 ಗಂಟೆಗಳ ಕಾಲ ಕಣ್ಣಿಡಲಾಗಿತ್ತು.

ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಂಟಿ ತಂಡವು ವಾಹನವನ್ನು ಶೋಧಿಸಿ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಯಿತು. ಮಣಿಪುರದಲ್ಲಿ ಹಿಂಸಾಚಾರವನ್ನು ಮುಂದುವರೆಸಲು ನಡೆಸಿದ್ದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.