ಮಂಗಳೂರು: ಕರ್ನಾಟಕದಲ್ಲಿ ಪ್ರಕರಣವೊಂದ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ
ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನು NIA ನ್ಯಾಯಾಲಯದ ಅಧಿಕಾರಿಗಳು ಅಂಟಿಸಿದ್ದಾರೆ. ಕೋರ್ಟ್ ಆದೇಶದ ಪ್ರತಿಯನ್ನು ಅಂಟಿಸಿರುವ ಅಧಿಕಾರಿಗಳು, ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.