ಬೆಂಗಳೂರು: ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 (KGF 2) ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರವೆತ್ತಿದೆ. ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧದ ಕೇಸ್ ತನಿಖೆಗೂ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆ ಎಂಆರ್ಟಿ ಮ್ಯೂಸಿಕ್ನಿಂದ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ FIR ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ಧಗೊಳಿಸಿವಂತೆ ಕೋರಿ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನಡೆದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.