ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಕೊಲೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಂತೆ ಇದೀಗ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ  ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ. ಈ ಕುರಿತು ಸ್ಥಳೀಯರು ಬೆಳಗ್ಗೆ ತಲಘಟ್ಟಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.