ಜುಲೈ 3 ರಿಂದ ಅಗಷ್ಟ 31 ರವರೆಗೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತ.

ಸಿದ್ದಾಪುರ: ಜುಲೈ 3 ರಿಂದ ಆಗಸ್ಟ್ 31 ರವರೆಗೆ
ಧರ್ಮಸ್ಥಳ ನಿತ್ಯಾನಂದನಗರದ ಶ್ರೀ ರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವ್ರತ ಆರಂಭಗೊಳ್ಳಲಿದ್ದು ಸಿದ್ದಾಪುರ ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ಬೇಡ್ಕಣಿ ಕೋರಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಸ್ವಾಮೀಜಿ ವೃತಾರಂಭದ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮಠದಲ್ಲಿ ಜರುಗಲಿವೆ. ಜುಲೈ 3 ರಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವನ್ನು ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೋಗ್ಯ ಸಚಿವ ದಿನೇಶ ಗುಂಡುರಾವ್, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ದಕ್ಷಿಣ ಕನ್ನಡ ಸಂಸದ ನಳೀನಕುಮಾರ, ಮಾಜಿ ಸಚಿವ ಸುನೀಲಕುಮಾರ, ಸಾಗರ ಶಾಸಕ ಬೇಳೂರ ಗೋಪಾಲಕೃಷ್ಣ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಅಶೋಕ ರೈ, ಉಮಾನಾಥ ಕೋಟ್ಯಾನ್, ಸತೀಶ ಸೈಲ್, ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ್, ಭಟ್ಕಳದ ಮಾಜಿ ಶಾಸಕ ಸುನೀಲ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಈ ವೇಳೆ ತಾಲೂಕಾ ನಾಮಧಾರಿ ಸಮಾಜದ ಅಧ್ಯಕ್ಷ ಕೆ.ಜಿ‌.ನಾಯ್ಕ, ಗೌರವಾಧ್ಯಕ್ಷ ಆನಂದ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಸ್.ಎಂ.ನಾಯ್ಕ, ಸಂಘಟನಾ ಕಾರ್ಯದರ್ಶಿಗಳಾದ ರವಿಕುಮಾರ ನಾಯ್ಕ, ಕೆ.ಆರ್.ವಿನಾಯಕ, ಸಹ ಕಾರ್ಯದರ್ಶಿ ಪ್ರವೀಣ ನಾಯ್ಕ ಉಪಸ್ಥಿತರಿದ್ದರು.