ತುಮಕೂರು: ಕುಣಿಗಲ್ನ ಸಪ್ತಗಿರಿ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ 4 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ದಿವಾಕರ್, ಅರುಣಾ ದಂಪತಿಯ ಮಗು ಉಸಿರಾಟ ತೊಂದರೆಯಿದ್ದ ಹಿನ್ನಲೆ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಕ್ಕಳ ತಜ್ಞರು ಲಭ್ಯವಿಲ್ಲದೇ ಇರುವುದರಿಂದ ಸಿಬ್ಬಂದಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಬಳಿಕ ಕೂಡಲೇ ಚುಂಚನಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಸಿಬ್ಬಂದಿ ತಿಳಿಸಿದ್ದಾರೆ. ಅಷ್ಟರಲ್ಲೇ ಮಗು ಸಾವೀಗಿಡಾಗಿದೆ. ಇದರಿಂದ ರೊಚ್ಚಿಗೆದ್ದ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾರೆ.