ಹೊನ್ನಾವರ: ಇತ್ತಿಚೀಗೆ ಶಿರೂರು ಟೊಲ್ ಗೇಟ್ ಬಳಿ ಅಂಬುಲೆನ್ಸ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳನ್ನು ಸೋಮವಾರ ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತರ ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿ ಧೈರ್ಯತುಂಬಿದರು. ಮರಣದ ದಾಖಲೆ ವಿವಿಧ ದಾಖಲಾತಿ ಸಮಸ್ಯೆಯ ಬಗ್ಗೆ ಸ್ಥಳಿಯರು ಹೇಳಿದಾಗ, ಸಂಭದಿಸಿದ ಎಲ್ಲಾ ದಾಖಲೆ ಒದಗಿಸುವ ಭರವಸೆ ನೀಡಿದರು. ಇದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಶೇಷ ಪರಿಹಾರಧನ ನೀಡುವಂತೆ ಒತ್ತಾಯಿಸಲಾಗುವುದು ಎಂದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ತಿಂಗಳ ಅಂತ್ಯದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಶಾಸಕ ಸುನೀಲ ನಾಯ್ಕ, ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್, ತಹಶೀಲ್ದಾರ ನಾಗರಾಜ ನಾಯ್ಕಡ್, ಸಿಪಿಐ ಶ್ರೀಧರ ಎಸ್.ಆರ್, ಆರ್.ಪಿ.ನಾಯ್ಕ, ಹರಿಯಪ್ಪ ನಾಯ್ಕ, ಕಮಲಾಕರ ಆಚಾರಿ ಮತ್ತಿತರರು ಉಪಸ್ಥಿತರಿದ್ದರು.