ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಸಂಸದ ಪ್ರತಾಪ್ ಸಿಂಹಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ.ಪ್ರದೀಪ್ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್​ಶಾಟ್ ಜೊತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿದ್ರು. ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ್ ಸಿಂಹ ದೂರು ನೀಡಿದ್ದರು. ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.