ದಾವಣಗೆರೆ: ನಾಲ್ಕು ದಿನದ ಹಿಂದೆ ಆರಂಭವಾದ ಧಾರವಾಡ-ಬೆಂಗಳೂರು ವಂದೇಭಾರತ್ (Dharwad-Bengaluru Vande Bharat Express) ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ನಡೆದಿದೆ. ಧಾರವಾಡದಿಂದ ನಿನ್ನೆ (ಜು.01) ರಂದು ಮಧ್ಯಾಹ್ನ ಬೆಂಗಳೂರಿಗೆ ತೆರಳುತ್ತಿರುವಾಗ ಕೃತ್ಯ ಸಂಭವಿಸಿದೆ. ಇದರಿಂದ ಸಿ-4 ಕೋಚ್‌ನ ಕಿಟಕಿಗೆ ಕಲ್ಲು ಬಡಿದಿದ್ದು, ಗ್ಲಾಸ್ ಬಿರುಕು ಬಿಟ್ಟಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.