ಹಾಸನ: ನಗರದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆದ ಪರಿಣಾಮ ಅವಘಡ ಸಂಭವಿಸಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಸಿಬ್ಬಂದಿಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಆ ಮೂಲಕ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಐಸಿಯು ಕೋಣೆಯೊಳೆಗೆ ಹೊಗೆ ತುಂಬಿಕೊಂಡಿದೆ. ಆಸ್ಪತ್ರೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್ ಮತ್ತು ಜಿಲ್ಲಾ ಶಸ್ತ್ರ ಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.