ಜೋಯಿಡಾ ತಾಲ್ಲೂಕು ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮತ್ತು ವೈದ್ಯರ ದಿನಾಚರಣೆ

ಜೋಯಿಡಾ : ತಾಲ್ಲೂಕು ಕೇಂದ್ರದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪದವಿ ಕಾಲೇಜು ಜೊಯಿಡಾ ಇವುಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿಜಯ ಕೊಚ್ಚರಗಿಯವರು ವೈದ್ಯರ ದಿನಾಚರಣೆಯ ದಿನದಂದೇ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ಔಚಿತ್ಯಪೂರ್ಣವಾಗಿದೆ ಎಂದರು.

ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ದೇಸಾಯಿ ಹಾಗೂ ರಾಜ್ಯ ಕಿಸಾನ ಕಾಂಗ್ರೆಸಿನ ಪ್ರ.ಕಾ. ರವಿ ರೇಡಕರ ಅವರು ಮಾತನಾಡಿ ಇನ್ನೊಬ್ಬರ ಜೀವವನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳು ಪರಿಣಾಮಕಾರಿಯಾಗಿದೆ ಎಂದರು.

ವೇದಿಕೆಯಲ್ಲಿ ಸರಕಾರಿ ಪದವಿ ಕಾಲೇಜಿನ ಕಾಲೇಜು ಪ್ರಾಚಾರ್ಯರಾದ ಅನುಜಾ ರಾಣೆ, ತಾಲೂಕು ಆಸ್ಪತ್ರೆಯ ವೈದ್ಯರುಗಳಾದ ಡಾ. ಬಡ್ಡಿ, ಡಾ. ಯಾಸ್ಮಿನ್, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸಿಟಿ ಸಂಸ್ಥೆಯ ಯೋಜನಾಧಿಕಾರಿ ಅಶೋಕ ಸೂರ್ಯವಂಶಿ, ಸಾಮಾಜಿಕ ಕಾರ್ಯಕರ್ತ ಸುಭಾಷ ವೇಳಿಪ್ ಮೊದಲಾದವರು ಉಪಸ್ಥಿತರಿದ್ದರು.
ಮಾತನಾಡಿದವರು.

ಶಿಬಿರದಲ್ಲಿ ವೈದ್ಯರುಗಳು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ತಾಲೂಕ ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನವನ್ನು ಮಾಡಿದರು.