ಗುವಾಹಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವವನ್ನು ನದಿಗೆ ಎಸೆದಿರುವ ಘಟನೆ ಅಸ್ಸಾಂನ ಗುವಾಹಟಿಯ ಕಮ್ರೂಪ್ (ಮೆಟ್ರೋ)ದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಈ ಬಾಲಕಿ 8ನೇ ತರಗತಿಯಲ್ಲಿ ಓದುತ್ತಿದ್ದು, ಸೋಮವಾರದಂದು ತನ್ನ ಮೊಬೈಲ್ಗೆ ರೀಚಾರ್ಜ್ ಮಾಡಲು ಎಂದು ಮೊಬೈಲ್ ಶಾಪ್ಗೆ ಹೋದವಳು ಮನಗೆ ವಾಪಸ್ ಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಕೆಯ ಶವ ಶುಕ್ರವಾರ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದ್ದು. ಇದರಿಂದ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.