ಅವಿವಾಹಿತರಿಗೆ ಶೀಘ್ರವೇ ಪಿಂಚಣಿ ಜಾರಿಗೆ- ಹರಿಯಾಣ ಸಿಎಂ ಘೋಷಣೆ

ಚಂಡೀಗಢ: 45 ರಿಂದ 60 ವರ್ಷದೊಳಗಿನ ಅವಿವಾಹಿತರಿಗೆ ಶೀಘ್ರವೇ ಪಿಂಚಣಿ ಕಾರ್ಯಕ್ರಮವನ್ನು ಪರಿಚಯಿಸಲಾಗುವುದು ಎಂದು ಹರಿಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ಭಾನುವಾರ ಘೋಷಿಸಿದ್ದಾರೆ.

ಕರ್ನಾಲ್‌ನ ಕಲಂಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮನೋಹರ್ ಲಾಲ್ ಖಟ್ಟರ್, 60 ವರ್ಷದ ಅವಿವಾಹಿತ ವ್ಯಕ್ತಿಯೊಬ್ಬರ ಪಿಂಚಣಿ ಬೇಡಿಕೆಗೆ ಸ್ಪಂದಿಸಿ, ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಒಂದು ತಿಂಗಳೊಳಗೆ ಯೋಜನೆಯ ಬಗ್ಗೆ ಸರ್ಕಾರ ಘೋಷಣೆ ಮಾಡಲಿದೆ ಎಂದು ಭರವಸೆ ನೀಡಿದರು.

ಮಾತ್ರವಲ್ಲದೇ ಹೆಚ್ಚುವರಿಯಾಗಿ ಮುಂದಿನ 6 ತಿಂಗಳಲ್ಲಿ ರಾಜ್ಯದ ಹಳೆಯ ಪಿಂಚಣಿ ತಿಂಗಳಿಗೆ 3,000 ರೂ.ಗೆ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 

ಜಿಲ್ಲೆಯ ಗ್ರಾಮಗಳನ್ನು ಆನ್‌ಲೈನ್ ಜಗತ್ತಿಗೆ ಜೋಡಿಸಲು ಮುಖ್ಯಮಂತ್ರಿಗಳು ಕರ್ನಾಲ್ ಉಪ ಆಯುಕ್ತರಿಗೆ ಸೂಚನೆಗಳನ್ನು ನೀಡಿದರು. ಇಂದು 70 ರಿಂದ 80% ರಷ್ಟು ಕೆಲಸವು ಆನ್‌ಲೈನ್‌ನಲ್ಲಿ ಪೂರ್ಣಗೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕದ ಉಪಸ್ಥಿತಿಯ ಅಗತ್ಯವಿದೆ. ಕರ್ನಾಲ್ ಪ್ರತಿ ಕುಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಇಂಟರ್ನೆಟ್ ಪಡೆಯುವ ಮೊದಲ ಜಿಲ್ಲೆಯಾಗಿದೆ ಎಂದು ಖಟ್ಟರ್ ಹೇಳಿದರು.