ರಸ್ತೆ ಬದಿ ಸೊಪ್ಪು ಮಾರುತ್ತಿದ್ದ ವೃದ್ಧೆ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ

ಬೆಂಗಳೂರು: ರಸ್ತೆ ಬದಿ ಸೊಪ್ಪು ಮಾರುತ್ತಿದ್ದ ವೃದ್ಧೆ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದೆ. ಕಳೆದ ಶನಿವಾರ ಜಯನಗರದ 26ನೇ ಕ್ರಾಸ್ ನಲ್ಲಿರುವ ಬಾಲಾಜಿ ಮೆಡಿಕಲ್ ಬಳಿಯ ಫುಟ್ ಪಾತ್​ ಮೇಲೆ ಸೊಪ್ಪು ಮಾರುತ್ತಿದ್ದ ಚಂದ್ರಮ್ಮ ಎಂಬ ವೃದ್ಧೆಯ ಮೇಲೆ ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಶನಿವಾರ ಸಂಜೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಂದ್ರಮ್ಮ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಚಂದ್ರಮ್ಮ ತಲೆಗೆ ತೀವ್ರಪೆಟ್ಟಾಗಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.