ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ  ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್​ ಟೈಮ್​ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.