ಶ್ರೀ.ಕ್ಷೇತ್ರ ಉಳವಿಯ ಸಾಲು ಮರದ ತಿಮ್ಮಕ್ಕ ಉದ್ಯಾನವನದಲ್ಲಿ ವನ ಮಹೋತ್ಸವ ಮತ್ತು ಬೀಜ ಬಿತ್ತೋತ್ಸವ ಕಾರ್ಯಕ್ರಮ

ಜೋಯಿಡಾ : ಜೋಯಿಡಾ ತಾಲೂಕಿನ ಶ್ರೀ.ಕ್ಷೇತ್ರ ಉಳವಿಯ ಸಾಲು ಮರದ ತಿಮ್ಮಕ್ಕ ಉದ್ಯಾನವನದಲ್ಲಿ ಗುಂದ ಅರಣ್ಯ ಇಲಾಕೆಯ ವತಿಯಿಂದ ವನ ಮಹೋತ್ಸವ ಮತ್ತು ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಉಳವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಮೋಕಾಶಿಯವರು ಅರಣ್ಯ ರಕ್ಷಣೆ ಬಗ್ಗೆ ಎಲ್ಲರಿಗೂ ಕಾಳಜಿ ಬೇಕು. ಅರಣ್ಯ ಸಂರಕ್ಷಣೆಯ ಬಗ್ಗೆ ಯುವ ಪೀಳಿಗೆ ಜಾಗೃತಿಯನ್ನು ಹೊಂದಬೇಕೆಂದು ಕರೆ ನೀಡಿದರು.

ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ನಿಂಗಾಣಿಯವರು ಭಾಗವಹಿಸಿ‌ ಮಾತನಾಡುತ್ತಾ, ಪರಿಸರ ಇದ್ದರೆ ನಾವು ಎನ್ನುವ ಮನವರಿಕೆ ಪ್ರತಿಯೊಬ್ಬ ನಾಗರಿಕರಿಗೂ ಬೇಕು. ಪ್ರಕೃತಿ ಸಂಪತ್ತಿನ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ವಲಯಾರಣ್ಯಾಧಿಕಾರಿ ರವಿಕಿರಣ್ ಸಂಪಗಾವಿ, ಹಿರಿಯರಾದ ಗೋಪಾಲ ಭಟ್ಟ ಶಿವಪುರ, ಉಳವಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಲ್ಮಠ ಶಾಸ್ತ್ರಿ, ಗ್ರಾ‌.ಪಂ.ಸದಸ್ಯ ಡಿ ಆರ್ ಗೌಡ ಮೊದಲಾದವರು ಉಪಸ್ಥಿತರಿದ್ದರು.