ಹಳಿಯಾಳದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಹಳಿಯಾಳ : ವೈಚಾರಿಕ ಶರಣ ಹಡಪದ ಅಪ್ಪಣ್ಣನವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಗ್ರೇಡ್ 2 ತಹಸಿಲ್ದಾರ್ ರತ್ನಾಕರ್ ಅವರು ಪುಷ್ಪ ಗೌರವವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಳಿಯಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸುಮಂಗಲ ಅಂಗಡಿ ಹಾಗೂ ಸಮಾಜ ಬಾಂಧವರು, ತಹಶೀಲ್ದಾರ್ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.