ಹೈದರಾಬಾದ್: ಸನ್‌ಸಿಟಿ ಬಂಡ್ಲಗುಡದ ಸಮೀಪ ಇಂದು ಬೆಳಗಿನ ಬೀಕರ ರಸ್ತೆ ಅಪಘಾತ ಸಂಭವಿಸಿದೆ, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಬಾರಿ ಈ ದೃಶ್ಯವನ್ನು ನೋಡಿದರೆ ಎದೆ ಝಲ್ ಎನ್ನುವುದು ಖಂಡಿತ.
ಈ ರಸ್ತೆಗಳಲ್ಲಿ ಓಡಾಡುವುದೇ ದೊಡ್ಡ ಕಷ್ಟವಾಗಿದೆ, ಪ್ರಾಣವನ್ನು ಕೈಹಿಡಿಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಸ್ವಲ್ಪ ಎಚ್ಚರ ತಪ್ಪಿದರು ಯಮನ ಪಾದ ಸೇರುವುದು ಖಂಡಿತ, ಇತ್ತೀಚೆಗೆ ದಿನಗಳಲ್ಲಿ ಹೆಚ್ಚು ಹೆಚ್ಚು ರಸ್ತೆ ಅಪಘಾತಗಳು ನಡೆಯುತ್ತಿದೆ. ಪಾದಚಾರಿಗಳು ಗಮನ ನೀಡಿದರು, ಈ ವಾಹನ ಸಂಚಾರಿಗಳು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಚಾಲಕರ ತಮ್ಮ ಬೇಜಾವಾಬ್ದಾರಿಗಳಿಂದ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ.
ಪೊಲೀಸರ ಪ್ರಕಾರ, ಬಲಿಯಾದವರಲ್ಲಿ ತಾಯಿ ಮತ್ತು ಮಗು, ಬೆಳಗಿನ ವಾಕಿಂಗ್‌ಗೆ ಹೊರಟಿದ್ದಾಗ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ತಾಯಿ ಮತ್ತು ಮಗು ಹಾಗೂ ಮತ್ತೊಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರು ಅತಿವೇಗದಲ್ಲಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.