ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆರಂಭಗೊಂಡಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯುತ್ತಿದೆ. ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ವಿಜಯಪುರ, ಬಾಗಲಕೋಟ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಶಾಸಕರು, ಅಧಿಕಾರಿಗಳು ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಆಲಮಟ್ಟಿ ಜಲಾಶಯದಿಂದ ವಿವಿಧ ನೀರಾವರಿ ಯೋಜನೆಗಳಿಗೆ ನೀರು ಬಿಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಡ್ಯಾಂನಲ್ಲಿ ನೀರಿನ ಸಂಗ್ರಹದ ಬಗ್ಗೆ ಸಮಾಲೋಚನೆ ಮಾಡಲಾಗುತ್ತಿದೆ. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸಭೆಗೆ ರೈತರನ್ನು ಆಹ್ವಾನಿಸದಿದ್ದರೆ ಪ್ರತಿಭಟನೆ ಮಾಡೋದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಭದ್ರತೆ ಕೈಗೊಳ್ಳಲಾಗಿದೆ.