ಭಾರಿ ಮಳೆಗೆ ಮಂಗಳೂರು ನಗರದಲ್ಲಿ ಗುಡ್ಡ ಕುಸಿತ

ಮಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಿ.ವಿ.ಎಸ್ ಬಳಿ ಗುಡ್ಡ ಕುಸಿತಗೊಂಡಿದೆ. ಪಿ.ವಿ.ಎಸ್​​ ನಿಂದ ಕೆ.ಎಸ್ ರಾವ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯಲ್ಲಿ ಗುಡ್ಡ ಕುಸಿದ ಹಿನ್ನಲೆ ಪಕ್ಕದಲ್ಲಿದ್ದ ಹಳೆಯ ಕಟ್ಟಡದ ಗೋಡೆ ಕೂಡ ಕುಸಿತವಾಗಿದೆ. ಗುಡ್ಡ ಕುಸಿತವಾದ ಸ್ಥಳಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದ್ದು, ಇನ್ನಷ್ಟು ಮಣ್ಣು ಕುಸಿಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.