ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನಲೆ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಈಗಾಗಲೇ ಶಾಲೆ ಕಾಲೇಜುಗಳಿಗೆ ನಿನ್ನೆಯಿಂದ ರಜೆ ನೀಡಲಾಗಿದೆ. ಆದರೀಗ ಮಹಾಮಳೆಗೆ ಜಿಲ್ಲೆಯಲ್ಲಿ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ರ್ದುದೈವಿ.

ಹೋಟೆಲ್ ಕೆಲಸ ಮಾಡುವ ಮೃತ ದಿವಾಕರ್​ ಅವರು ನಿನ್ನೆ ರಾತ್ರಿ ಹೋಟೆಲ್ ಕೆಲಸ ಮುಗಿಸಿ ತೆಕ್ಕಟೆಯ ಮಲ್ಯಾಡಿ ಸಮೀಪ ಸ್ಕೂಟರ್​ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರಿಗೆ ಕಾಲು ನೋವು ಇದ್ದ ಹಿನ್ನೆಲೆಯಲ್ಲಿ ಇಳಿಯಲಾಗದೇ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಸಾವನ್ನಪ್ಪಿದ್ದರು. ತಡರಾತ್ರಿ ಘಟನಾ ಸ್ಥಳಕ್ಕೆ ಮುಳುಗುತಜ್ಞ ಈಶ್ವರಮಲ್ಪೆ ಆಗಮಿಸಿ ಕಾರ್ಯಾಚರಣೆ ನಡೆಸಿ ಶವವನ್ನ ಮೇಲಕ್ಕೆ ತಗೆದಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.