ಹುಬ್ಬಳ್ಳಿ: ಧಾರವಾಡದ ಐಐಟಿ ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸುವ ಯೋಜನೆಗೆ ಪ್ಲಾನ್ ರೂಪಿಸಲಾಗುತ್ತಿದೆ. ಮಾನವರಹಿತ ವೈಮಾನಿಕ ವಾಹನ ತಂತ್ರಜ್ಞಾನ ಅಭಿವೃದ್ಧಿ ಅಧ್ಯಯನಕ್ಕಾಗಿ ಈ ಪ್ರಯೋಗಾಲಯ ಕಾರ್ಯನಿರ್ವಹಿಸಲಿದೆ.
ಇತ್ತೀಚಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ ಬಳಸಲಾಗುತ್ತಿದೆ. ಫೋಟೋಗ್ರಫಿ, ವಿಡೀಯೋಗ್ರಫಿಗಳಲ್ಲದೇ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ನಂದಿಸುವ ಕಾರ್ಯಗಳಲ್ಲಿ ಕೂಡ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ರೈತರು ಕಳೆದ 3 ವರ್ಷಗಳಿಂದ ಬೆಳೆಗಳಿಗೆ ಕೀಟನಾಶಕಗಳ ಸಿಂಪಡಣೆಗೂ ಡ್ರೋನ್‌ಗಳನ್ನು ಬಳಕೆ ಮಾಡುತ್ತಿದ್ದಾರೆ.
ಕೆಪಿಟಿಸಿಎಲ್ ಸಂಸ್ಥೆಗೆ ಅನುದಾನವನ್ನು ನೀಡಿದ್ದು, ಐಐಟಿ ಕ್ಯಾಂಪಸ್‌ನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಬಳಕೆಯಾಗುತ್ತಿದೆ. ಈ ಪ್ರಯೋಗಾಲಯ ಡ್ರೋನ್ ತಂತ್ರಜ್ಞಾನ ಅಧ್ಯಯನ ಹಾಗೂ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುಲು ಸಹಕಾರಿಯಾಗುವುದು ಎಂದು ಐಐಟಿ ಧಾರವಾಡದ ಹಿರಿಯ ಪ್ರಾಧ್ಯಾಪಕರು ಹೇಳಿದ್ದಾರೆ.