ಇ-ಸ್ವತ್ತು ಮಾಡಿಕೊಡಲು 25 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ

ಹಾಸನ: ಇತ್ತೀಚೆಗೆ ಲೋಕಾಯುಕ್ತ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಕಳೆದ ಜೂ.28 ರಂದು ಕರ್ನಾಟಕದ 62 ಕಡೆಗಳಲ್ಲಿ  ಲೋಕಾಯುಕ್ತ ದಾಳಿ ಮಾಡಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ, ನಗದು, ಅಕ್ರಮ ಆಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಂತೆ ಇದೀಗ ಹಾಸನ ನಗರಸಭೆ ವಾರ್ಡ್ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಕೇಳಿದ್ದು, ಅದನ್ನು ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಅಧಿಕಾರಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಜೂ.28ರಂದು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಛೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಐಷಾರಾಮಿ ಕಾರು, ಆಸ್ತಿ ದಾಖಲೆಗಳ ಪತ್ರಗಳನ್ನು ವಶಪಡಿಸಿಕೊಂಡಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ 62ಕ್ಕೂ ಹೆಚ್ಚು ಕಡೆ ಬೃಹತ್​ ಬೇಟೆಯಾಡಿದ್ದರು.