ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಾಷ್ಟ್ರೀಯ ಹೆದ್ದಾರಿ 66 ರ ಬಳಿ‌ ಪಲ್ಟಿ

ಕುಮಟಾ : ತಾಲೂಕಿನ ಬರ್ಗಿಯ ಸಮೀಪ, ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿರುವ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲೂಕಿನಲ್ಲಿ 127.0 ಮೀ.ಮೀ ಅತೀ ಹೆಚ್ಚು ಮಳೆಯಾಗಿರುವ ಕುರಿತು ದಾಖಲಾಗಿದ್ದು, ಹೀಗೆ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಈ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಕುಮಟಾದಿಂದ ಅಂಕೋಲದ ಕಡೆ ಕಾರ್ ಚಲಿಸುತ್ತಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಪಕ್ಕ ಪಲ್ಟಿಯಾಗಿದ್ದು, ಕಾರ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಕರ್ಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..