ಕಲಬುರಗಿ: ಮುಂದುವರೆಯುತ್ತಿರುವ ಜಗತ್ತಿನಲ್ಲಿ ಸೋದರ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅದರಂತೆ ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ(ಜು.5) ಮಧ್ಯಾಹ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಹುಡುಗರು ಬಾಲಕಿಯನ್ನ ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಸ್ಥ ಬಾಲಕಿಯನ್ನ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.