ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ   ಅವರ 88ನೇ ವರ್ಷದ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ದಲೈ ಲಾಮಾ ಅವರಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ  ನಿಮ್ಮದಾಗಲಿ ಎಂದು ಹಾರೈಸಿದ್ದಾರೆ. ತಮ್ಮ 88ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ದಲೈಲಾಮಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಾವು ಬಯಸುತ್ತೇವೆ ಎಂದಿದ್ದಾರೆ.

ದಲೈ ಲಾಮಾ ಅವರು 1935ರ ಜುಲೈ 6 ರಂದು ಟಿಬೆಟ್​ನಲ್ಲಿ ಜನಿಸಿದರು. 1959ರಲ್ಲಿ ಚೀನಾದ ಆಕ್ರಮಣಕಾರಿ ನಡೆಗೆ ಬೇಸತ್ತು ಟಿಬೆಟ್​ನಿಂದ ಭಾರತಕ್ಕೆ ವಲಸೆ ಬಂದಿದ್ದರು. ಹಿಮಾಚಲ ಪ್ರದೇಶದ ಧರ್ಮಶಾಲಾ ಎಂಬಲ್ಲಿ ವಾಸವಿದ್ದರು, ಅವರಿಗೆ 1969ರಲ್ಲಿ ನೊಬೆಲ್ ಪ್ರಶಸ್ತಿ ದೊರೆತಿತ್ತು.

1989 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ, 1991 ರಲ್ಲಿ ಯುನೈಟೆಡ್ ನೇಷನ್ಸ್ ಅರ್ಥ್ ಪ್ರಶಸ್ತಿ, 2007 ರಲ್ಲಿ ಯುಎಸ್ ಕಾಂಗ್ರೆಷನಲ್ ಚಿನ್ನದ ಪದಕ ಮತ್ತು 2012 ರಲ್ಲಿ ಟೆಂಪಲ್ಟನ್ ಪ್ರಶಸ್ತಿ ಸೇರಿದಂತೆ 150 ಕ್ಕೂ ಹೆಚ್ಚು ಪ್ರಮುಖ ಪ್ರಶಸ್ತಿಗಳು, ಬಹುಮಾನಗಳು ಮತ್ತು ಗೌರವ ಡಾಕ್ಟರೇಟ್‌ಗಳನ್ನು ಅವರಿಗೆ ಸಂದಿವೆ.

ದಲೈ ಲಾಮಾ ಅವರ ಜನ್ಮದಿನದ ಸಂದರ್ಭದಲ್ಲಿ ವಿಶ್ವ ನಾಯಕರು ಸೇರಿದಂತೆ ವಿಶ್ವದಾದ್ಯಂತದ ಅನುಯಾಯಿಗಳು ಅವರಿಗೆ ಶುಭಾಶಯ ಕೋರಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದಲೈಲಾಮಾ ಅವರಿಗೆ ಶುಭ ಹಾರೈಸಿದ್ದಾರೆ.