ಶಿವಮೊಗ್ಗ: ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ
ಭರ್ತಿಯಾದ ಹಿನ್ನೆಲೆ ಜಲಾಶಯದ 10 ಗೇಟ್‌ಗಳಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರು ಭರ್ತಿಯಾಗಿದ್ದರಿಂದ ಜಲಾಶಯದ ಅಧಿಕಾರಿಗಳು ಗುರುವಾರ ಮುಂಜಾನೆ 2 ಗೇಟ್‌ಗಳನ್ನು ಓಪನ್ ಮಾಡಿದ್ದರು. ಆದರೆ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ನೀರು ಹೆಚ್ಚಳವಾದ್ದರಿಂದ 10 ಗೇಟ್‌ಗಳಿಂದ ನದಿ ಪಾತ್ರಗಳಿಗೆ ನೀರನ್ನು ಬಿಡಲಾಗುತ್ತಿದೆ.
ರಾಜ್ಯಕ್ಕೆ ಮುಂಗಾರು ಲಗ್ಗೆ ಇಟ್ಟಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಅಂತೆಯೇ ಶಿವಮೊಗ್ಗದಲ್ಲಿ ಧಾರಕಾರ ಮಳೆ ಸುರಿದ ಪರಿಣಾಮ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಇಂದು ಮುಂಜಾನೆ 2 ಗೇಟ್‌ಗಳ ಮೂಲಕ 2 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿತ್ತು. ಜಲಾಶಯದ ಗರಿಷ್ಠ ಮಟ್ಟ 584.24 ಮೀಟರ್ ಇದ್ದು, ಇಂದು ಜಲಾಶಯ ಗರಿಷ್ಠ ಮಟ್ಟವನ್ನು ತಲುಪಿದೆ.