ಹಳಿಯಾಳ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ಕರೀಂ ಅಸದಿ

ಹಳಿಯಾಳ : ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿಯ ಯೋಜನಾ ಸಂಯೋಜಕರಾದ ಕರಿಂ ಅಸದಿಯವರು ಭೇಟಿ ನೀಡಿ ನರೇಗಾ ಹಾಗೂ ಇನ್ನಿತರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಹಳಿಯಾಳ ತಾಲೂಕಿನ ಮದ್ನಳ್ಳಿ, ಭಾಗವತಿ ಮತ್ತು ಬೆಳವಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತನ ಕಾರ್ಯನಿರ್ವಾಹಣಾಧಿಕಾರಿ ಪರಶುರಾಮ ಎಂ ಗಸ್ತೆ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಎಂ.ಎನ್. ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.