ನರೇಗಾದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುವಂತೆ ಪಟ್ಟಣದ ತಾ.ಪಂ ಸಭಾಭವನದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿ.ಪಂ ಯೋಜನಾ ನಿರ್ದೇಶಕರಾದ ಕರೀಂ ಅಸದಿ

ಹಳಿಯಾಳ- ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಹಳಿಯಾಳ ತಾಲೂಕಿನಲ್ಲಿ ಉತ್ತಮ‌ ಕೆಲಸಗಳಾಗುತ್ತಿದ್ದು, ಗ್ರಾಮೀಣ ಜನರಿಗೆ ಉಪಯೋಗವಾಗುವ ಎಲ್ಲ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಹಾಗೆಯೇ ಮಹಿಳಾ ಭಾಗವಹಿಸುವಿಕೆ ಎಲ್ಲ ಗ್ರಾಮ ಪಂಚಾಯತಿಗಳಲ್ಲೂ ಹೆಚ್ಚಾಗಿದ್ದು, ಶೇ 50% ಕ್ಕಿಂತ ಕಡಿಮೆ ಇರುವ ಗ್ರಾಮ ಪಂಚಾಯತಿಗಳು ಮಹಿಳೆಯರು ಪಾಲ್ಗೊಳ್ಳುವ ಸಮುದಾಯಿಕ ಕಾಮಗಾರಿಗಳನ್ನು ಹೆಚ್ಚು ಕೈಗೊಂಡು ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯ್ತು ಯೋಜನಾ ನಿರ್ದೇಶಕರಾದ ಕರೀಂ ಅಸದಿ ಅವರು ಹೇಳಿದರು.

ಹಳಿಯಾಳ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಎಂ ಗಸ್ತೆ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಎಂ.ಎನ್. ಕುಮಾರ, ಜಿಲ್ಲಾ ಪಂಚಾಯತ ನರೇಗಾ ಯೋಜನೆಯ ಎಡಿಪಿಸಿ, ಎಲ್ಲ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಎಮ್.ಐ.ಎಸ್, ಐ.ಇ.ಸಿ ಸಂಯೋಜಕರು, ಅಭಿಯಂತರರು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.