ಉತ್ತರ ಕನ್ನಡದಲ್ಲಿ ಭಾರಿ ಮಳೆ : ಸತತ 3ನೇ ದಿನವೂ ಶಾಲೆಗೆ ರಜೆ ಘೋಷಣೆ 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಸತತ ಮೂರನೇ ದಿನವೂ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಹೊನ್ನಾವರ, ಅಂಕೋಲ ಮತ್ತು ಭಟ್ಕಳ ತಾಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭು ಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ

ಸತತ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರೆಯುವ ಸೂಚನೆ ಇದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.