ಉತ್ತರ ಕನ್ನಡ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಸವನ್ನಪ್ಪಿರುವ ಘಟನೆ ಕುಮಟಾ(Kumta) ತಾಲೂಕಿನ ಬರ್ಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ. ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಮೃತ ರ್ದುದೈವಿಗಳು. ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದು, ಈ ವೇಳೆ ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನೀರಿನ ರಭಸಕ್ಕೆ ಇಬ್ಬರೂ ಕಾಲು ಜಾರಿ ಬಿದ್ದು ಈ ದುರ್ಘಟನೆ ನಡೆದಿದ್ದು, ಕೆಲವು ಗಂಟೆ ಬಳಿಕ ಇಬ್ಬರ ಶವಗಳು ಪತ್ತೆಯಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.